Monday, March 30, 2026
Homebig breakingಹೈಕೊರ್ಟ್‌ನಲ್ಲಿ ಸಿಎಂಗೆ ಹಿನ್ನಡೆ - ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ..!

ಹೈಕೊರ್ಟ್‌ನಲ್ಲಿ ಸಿಎಂಗೆ ಹಿನ್ನಡೆ – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ..!

ಬೆಂಗಳೂರು : ಮುಡಾ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಬೆನ್ನಲ್ಲೇ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹ ಕೇಳಿಬಂದಿದೆ.


ಮುಖ್ಯಮಂತ್ರಿಗಳ ವಿರುದ್ಧ ಗಂಭೀರ ಆರೋಪ ಇದೆ. ಹೈರ್ಟ್‌ನಲ್ಲೂ ಸಿಎಂಗೆ ಹಿನ್ನಡೆಯಾಗಿದೆ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹಿಸಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ತಪ್ಪು ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಎಲ್ಲಾ ದಾಖಲೆಗಳನ್ನು ಪರಿಗಣಿಸಿ ರಾಜ್ಯಪಾಲರು ಪಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರು. ಆದರೆ ಅದನ್ನೇ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದರು. ಅಲ್ಲೂ ಅವರಿಗೆ ಮುಖಭಂಗವಾಗಿದೆ. ನೈತಿಕ ಹೊಣೆ ಹೊತ್ತು ಗೌರವಯುತವಾಗಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!