Sunday, November 15, 2026
Homeಕ್ರೈಮ್ಕಾರು ಮತ್ತು ಥಾರ್ ನಡುವೆ ಡಿಕ್ಕಿ : ಸ್ಥಳದಲ್ಲೇ ಪ್ರಾಣ ಬಿಟ್ಟ ಮೆಸ್ಕಾಂ ಅಧಿಕಾರಿ!

ಕಾರು ಮತ್ತು ಥಾರ್ ನಡುವೆ ಡಿಕ್ಕಿ : ಸ್ಥಳದಲ್ಲೇ ಪ್ರಾಣ ಬಿಟ್ಟ ಮೆಸ್ಕಾಂ ಅಧಿಕಾರಿ!

Telegram Group
Join Now

ಚಿಕ್ಕಮಗಳೂರು:  ಕಡೂರು ತಾಲೂಕಿನ ಬುಕ್ಕಸಾಗರ ಗೇಟ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಸ್ಕಾಂ ಜೆಇ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 49 ವರ್ಷದ ಸನತ್ ಅವರು ದುರಂತ ಅಂತ್ಯ ಕಂಡಿದ್ದಾರೆ.

ಸನತ್ ಅವರು ತಮ್ಮ ಫೋರ್ಡ್ ಕಾರಿನಲ್ಲಿ ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರಿನಿಂದ ಬಂದ ಥಾರ್ ಜೀಪ್‌ಗೆ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಫೋರ್ಡ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸನತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದೇ ಘಟನೆಯಲ್ಲಿ ಥಾರ್ ಜೀಪ್‌ನಲ್ಲಿದ್ದ ಮಂಜುಳಾ, ಸ್ವಾತಿ ಹಾಗೂ ಸೋಮೇಶ್ ಎಂಬ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ.

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!