Monday, March 16, 2026
Homeಕ್ರೈಮ್ದಕ್ಷಿಣ ಕನ್ನಡ: ವಿಷ ಸೇವಿಸಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ!

ದಕ್ಷಿಣ ಕನ್ನಡ: ವಿಷ ಸೇವಿಸಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ ನಿಗೂಢ!

ದಕ್ಷಿಣ ಕನ್ನಡ: ಕೀಟನಾಶಕ ವಿಷ ಸೇವಿಸಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ನಡೆದಿದೆ.

ಹೌದು .. ಹರ್ಷಿತ(15) ಮೃತ ವಿದ್ಯಾರ್ಥಿನಿಯಾಗಿರುತ್ತಾಳೆ. ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪಾರಕ ಎಂಬಲ್ಲಿರುವ ತಮ್ಮ ಮನೆಯಲ್ಲಿದ್ದಳು.

ತಂದೆ ತಾಯಿ ಕೂಲಿ ಕೆಲಸಕ್ಕೆ ಹೊರಗೆ ಹೋದ ಮೇಲೆ ಮನೆಯಲ್ಲಿ ಹುಲ್ಲಿಗೆ ಸಿಂಪಡಿಸುವ ಕೀಟನಾಶಕ ತಂದಿಟ್ಟಿದ್ದನ್ನು ಸೇವಿಸಿ ಅಸ್ವಸ್ಥಗೊಂಡಿದ್ದಳು. ವಿಷಯ ತಿಳಿದ ಕೂಡಲೇ ತಂದೆ ತಾಯಿ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹರ್ಷಿತಾ ಸಾವನ್ನಪ್ಪಿದ್ದಳು. ಮಗಳನ್ನು ಕಳೆದಕೊಂಡ ಪೋಷಕರು ದುಃಖದ ಮಡುವಿನಲ್ಲಿ ಬೆಂದು ಹೋದರು.

ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಅಥವಾ ಬೇರೆ ಕಾರಣ ಏನೇಂಬುದನ್ನು ಪೊಲೀಸರು ಬಗೆಹರಿಸಬೇಕಾಗಿದೆ.

ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಪ್ರಕರಣದ ತನಿಖೆ ಮುಂದುವರೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!