ಮೂಡಿಗೆರೆ: ತೋಟಗಾರಿಕ ಕೃಷಿ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ ಆಯೋಜನೆ ರೂಪುಗೊಂಡಿದ್ದು ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ದಾರದಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ NSS ಶಿಬಿರ ನಡೆಯುತ್ತಿದ್ದೂ ಈ ಹಿನ್ನಲೆಯಲ್ಲಿ ಗ್ರಾಮದ ಸುತ್ತ ಮುತ್ತ ವಿದ್ಯಾರ್ಥಿಗಳು ಸ್ವಚ್ಛತೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ವಿಕ್ರಂ ಗೌಡ ಮಾತನಾಡಿ, ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವುದು ಸಮಾಜದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಉತ್ತೇಜಿಸುವ ಒಂದು ಪ್ರಮುಖ ಚಟುವಟಿಕೆಯಾಗಿದೆ. ಈ ಕಾರ್ಯಕ್ರಮಗಳು ವ್ಯಕ್ತಿಗಳು ಮತ್ತು ಸಮುದಾಯಗಳ ನಡುವೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಬೆಳೆಸಲು ಸಹಾಯ ಮಾಡುತ್ತದೆ.
ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವುದರಿಂದ ಸಮಾಜದಲ್ಲಿ ಯುವ ಪೀಳಿಗೆ ಸುತ್ತಮುಲಿನ ಪ್ರದೇಶಗಳನ್ನು ಸ್ವತಃ ವಿದ್ಯಾರ್ಥಿಗಳೇ ಸ್ವಚ್ಛ ಮಾಡುವುದರಿಂದ ಶುಚಿ ಬಗ್ಗೆ ಹೆಚ್ಚಿನ ಅರಿವು ಮೂಡುತ್ತದೆ
ಮಾಧ್ಯಮ, ಪತ್ರಿಕೆಗಳ ಮೂಲಕ ಕಾರ್ಯಕ್ರಮದ ಬಗ್ಗೆ ಪ್ರಚಾರ ಮಾಡಬೇಕು ಸ್ವಯಂಪ್ರೇರಿತವಾಗಿ ಮತ್ತು ಶ್ರಮದಾನಗಳ ಮೂಲಕ ಸ್ವಚ್ಛ ಭಾರತ್ ನಿರ್ಮಾಣ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಡಾ. ಧನಂಜಯ್ ಹಾಗೂ ಡಾ. ನಾಗರಾಜ್ ಮಾರ್ಗದರ್ಶನ ನೀಡಿದರು.. ಗ್ರಾಮಸ್ಥರಾದ ಕಿರಣ್, ಮಧು ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.