Tuesday, September 22, 2026
Homeಕ್ರೈಮ್ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳ ವರ್ತನೆ ಕುರಿತು ತನಿಖೆಗೆ ಆಗ್ರಹ: ಶ್ರೀಜಿತ್ ದಂಡಿನಮಕ್ಕಿ

ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳ ವರ್ತನೆ ಕುರಿತು ತನಿಖೆಗೆ ಆಗ್ರಹ: ಶ್ರೀಜಿತ್ ದಂಡಿನಮಕ್ಕಿ

Telegram Group
Join Now

ಶೃಂಗೇರಿ : ಕ್ಷೇತ್ರದಲ್ಲಿ ಅಧಿಕಾರಿಗಳ ದುವರ್ತನೆ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶ್ರೀಜಿತ್ ದಂಡಿನಮಕ್ಕಿ ಅವರು ಆಗ್ರಹಿಸಿದ್ದಾರೆ.

ಕ್ಷೇತ್ರದಲ್ಲಿ ಕೆಲವು ಸರ್ಕಾರಿ ಅಧಿಕಾರಿಗಳು, ಇಒ, ಪಿಡಿಓ ಹಾಗೂ ಸರ್ಕಾರಿ ನೌಕರರು ಬಾರ್‌ನಲ್ಲಿ ಕುಳಿತು ಮದ್ಯಪಾನ ಮಾಡುತ್ತಿರುವುದು, ಅಮಲಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಸೇರಿದಂತೆ ಹಲವು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಈ ಘಟನೆ ಪ್ರಶ್ನಿಸಿದವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವೂ ಇದೆ. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ನಂತರ ಕೆಲವು ಪಿಡಿಓಗಳು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿರುವುದು ಹಾಗೂ ಸರ್ಕಾರಿ ವಾಹನವನ್ನು ಬಾರ್ ಬಳಿ ನಿಲ್ಲಿಸಿ ಮದ್ಯಪಾನ ಮಾಡಲಾಗಿದೆ ಎನ್ನಲಾದ ವೀಡಿಯೋಗಳೂ ಹರಿದಾಡುತ್ತಿವೆ.

ಇಷ್ಟೆಲ್ಲ ಗಂಭೀರ ಆರೋಪಗಳು ಮತ್ತು ವೀಡಿಯೋಗಳು ಸಾರ್ವಜನಿಕವಾಗಿ ಹರಿದಾಡುತ್ತಿದ್ದರೂ ಜಿಲ್ಲಾಡಳಿತದ ಮೌನ ಏಕೆ? ಎಂದು ಪ್ರಶ್ನೆ ಮಾಡಿದರು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳು ತಕ್ಷಣ ನಿಷ್ಪಕ್ಷಪಾತ ತನಿಖೆ ನಡೆಸಿ, ವೀಡಿಯೋಗಳ ಸತ್ಯಾಸತ್ಯತೆ ಪರಿಶೀಲಿಸಬೇಕು. ತಪ್ಪು ಸಾಬೀತಾದರೆ ಅಧಿಕಾರಿಗಳು ಯಾರೇ ಆಗಿದ್ದರೂ ಕಠಿಣ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹುದ್ದೆಯ ಗೌರವ ಮತ್ತು ಸಾರ್ವಜನಿಕರ ವಿಶ್ವಾಸ ಕಾಪಾಡುವುದು ಜಿಲ್ಲಾಡಳಿತದ ಜವಾಬ್ದಾರಿ ಎಂದು ತಿಳಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!