Friday, July 17, 2026
Homeಜಿಲ್ಲಾಸುದ್ದಿಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ.ರಾಜೇಗೌಡರಿಗೆ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಲಿ: ಓಣಿತೋಟ ರತ್ನಾಕರ್ ಆಗ್ರಹ

ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ.ರಾಜೇಗೌಡರಿಗೆ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಲಿ: ಓಣಿತೋಟ ರತ್ನಾಕರ್ ಆಗ್ರಹ

Telegram Group
Join Now

ಕೊಪ್ಪ: ನೂತನ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರ ನಾಯಕತ್ವದ ಮಂತ್ರಿ ಮಂಡಲದಲ್ಲಿ ಶೃಂಗೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಟಿ ಡಿ ರಾಜೇಗೌಡರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿಯನ್ನು ನೀಡಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕೆಂದು ಶೃಂಗೇರಿ ಕ್ಷೇತ್ರದ ಎಲ್ಲಾ ಜನತೆಯ ಪರವಾಗಿ ಒತ್ತಾಯಿಸುತ್ತೇನೆ ಎಂದು ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಓಣಿತೋಟ ರತ್ನಾಕರ್ ಆಗ್ರಹಿಸಿದ್ದಾರೆ.

ಹೌದು .. ಪತ್ರಿಕಾ ಪ್ರಟಣೆಹೊರಡಿಸಿದ ಅವರು, ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಇಡಿ ರಾಜ್ಯದಲ್ಲಿಯೇ ಚಿಕ್ಕಮಗಳೂರು ಜಿಲ್ಲೆ ಅಭಿವೃದ್ಧಿಯಲ್ಲಿ ಪ್ರಥಮ ಸ್ಥಾನಗಳಿಸಿ ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಇತಿಹಾಸದಲ್ಲಿಯೇ ಮಲೆನಾಡು ಭಾಗದ ಪ್ರತಿಯೊಬ್ಬ ಶಾಸಕನಿಗೆ 1 ಕೋಟಿ ಅನುಧಾನ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿ, ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷರಾಗಿ 2 ಬಾರಿ ರಾಷ್ಟ್ರಪ್ರಶಸ್ತಿಗಳಿಸಿ, ಈ ಬಾರಿ ರಾಷ್ಟ್ರಪತಿಗಳಿಂದ ರಾಷ್ಟ್ರಪ್ರಶಸ್ತಿ ಪಡೆದರು.

ಹಾಗೆ ಶೃಂಗೇರಿ ಕ್ಷೇತ್ರದಲ್ಲಿ 8 ವರ್ಷಗಳಿಂದ ಗ್ರಾಮೀಣ ಪ್ರದೇಶದ ರಸ್ತೆಗಳು, ಮುಖ್ಯ ರಸ್ತೆಗಳು ಆಸ್ಪತ್ರೆಗಳು, ಜಯಪುರ ಬಾಳೆಹೊನ್ನೂರು ಮತ್ತು ಹರಿಹರಪುರ ರಸ್ತೆಗಳ ಅಗಲೀಕರಣಕ್ಕೆ ಅನುಧಾನ ತಂದು ಕ್ಷೇತ್ರದಲ್ಲಿ ಹಿಂದೆಂದು ಮಾಡಿಲ್ಲದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ರವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಟಿ ಡಿ ರಾಜೇಗೌಡರವರಿಗೆ ಕ್ಯಾಬಿನೆಟ್ ದರ್ಜೆ ಸಚಿವರನ್ನಾಗಿ ಮಾಡಲಿ

ಚಿಕ್ಕಮಗಳೂರು ಜಿಲ್ಲೆಯ 4 ಕಾಂಗ್ರೆಸ್ ಪಕ್ಷದ ಶಾಸಕರ ಸಹಕಾರದಿಂದ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸುವುದರಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂಬ ನಂಬಿಕೆ ಇರುವುದರಿಂದ ಮಂತ್ರಿ ಸ್ಥಾನ ನೀಡುವಂತೆ ಶೃಂಗೇರಿ ಕ್ಷೇತ್ರದ ಎಲ್ಲಾ ಜನತೆಯ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.

ವರದಿ: ಶಶಿ ಬೆತ್ತದಕೊಳಲು!

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments