ಎನ್.ಆರ್ ಪುರ: ಮಾಜಿ ಶಾಸಕ ಡಿ.ಎನ್ ಜೀವರಾಜ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ, ಪೋಸ್ಟ್ ಗಳನ್ನು ಹಾಕಲಾಗುತ್ತಿದೆ ಎಂದು ಆರೋಪಿಸಿ ತಾಲೂಕು ಬಿಜೆಪಿ ಅಧ್ಯಕ್ಷ ನಿಲೇಶ್ ರವರ ನೇತೃತ್ವದಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ದೂರಿನಲ್ಲೇನಿದೆ:
ಹಲವು ದಿನಗಳಿಂದ ಮಾಜಿ ಶಾಸಕ ಡಿ.ಎನ್ ಜೀವರಾಜ್ ವಿರುದ್ಧ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಎಂಬ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ಸಂದೇಶ, ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು, ಈ ಕುರಿತು ಎನ್.ಆರ್ ಪುರ ತಾಲೂಕು ಬಿಜೆಪಿ ಅಧ್ಯಕ್ಷರಾದ ನಿಲೇಶ್ ರವರ ನೇತೃತ್ವದಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ದೂರಿನಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಇಲ್ಲದಿದ್ದರೆ ಇದರ ವಿರುದ್ಧ ನಾವು ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.