ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಅತ್ಯಂತ ಮನಮೋಹಕ ಪ್ರವಾಸಿ ತಾಣವಾದ ದೇವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಇಲಾಖೆಯ ಬೇಜವಾಬ್ದಾರಿತನಕ್ಕೆ ಬೇಸತ್ತ ಸ್ಥಳೀಯ ಗ್ರಾಮಸ್ಥರೇ ಸ್ವಯಂ ಪ್ರೇರಿತರಾಗಿ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.
ದೇವರ ಮನೆ ಗುಡ್ಡದ ಸೌಂದರ್ಯ ಸವಿಯಲು ವಾರಂತದ ದಿನಗಳಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ ಆದರೆ ಸದ್ಯ ಈ ಸಂಪರ್ಕ ರಸ್ತೆ ಉದ್ದಕ್ಕೂ ಬೃಹತ್ ಗುಂಡಿಗಳು ಹೊಂಡಗಳು ನಿರ್ಮಾಣವಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ, ರಸ್ತೆ ಅವ್ಯವಸ್ಥೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದ್ದು ವಾರಂತ್ಯದಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಇದರಿಂದ ಬೇಸತ್ತು ಗ್ರಾಮಸ್ಥರು ಯಾವುದೇ ಸರ್ಕಾರದ ನೆರವಿಗೂ ಕಾಯದೆ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಸಿದರು
ಇದೇ ವೇಳೆ ಗ್ರಾಮಸ್ಥ ಗೌತಮ್ ಕೋಗಿಲೆ ಮಾತನಾಡಿ ದೇವರ ಮನೆ ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿದ್ದರು ಸಂಪರ್ಕ ರಸ್ತೆ ಸಂಪೂರ್ಣ ಹಾಳಾಗಿದೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಶಾಶ್ವತ ದುರಸ್ತಿ ಕಾಮಗಾರಿ ಕೈಗೊಂಡಿಲ್ಲ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶೀಘ್ರವೇ ರಸ್ತೆ ದುರಸ್ತಿಯನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಗ್ರಾಮಸ್ಥರಾದ ಸಜಿತ್, ತಾರಾನಾಥ್, ಆಧುನಿಕ, ಸತೀಶ್, ರಂಜಿತ್, ವೀರೇಶ್ ಮೊದಲಾದವರು ಉಪಸ್ಥಿತರಿದ್ದರು.
