Saturday, August 8, 2026
Homeಜಿಲ್ಲಾಸುದ್ದಿಆದ್ಯತೆಗೆ ಅನುಗುಣವಾಗಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ: ಶಾಸಕ ಸಿಮೆಂಟ್ ಮಂಜು

ಆದ್ಯತೆಗೆ ಅನುಗುಣವಾಗಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ: ಶಾಸಕ ಸಿಮೆಂಟ್ ಮಂಜು

Telegram Group
Join Now

ಸಕಲೇಶಪುರ: ಗ್ರಾಮಾಂತರ ಪ್ರದೇಶಗಳ ರಸ್ತೆಗಳ ಅಭಿವೃದ್ದಿಗೆ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಕುನಿಗನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರಂಥಾಲಯ ಕಟ್ಟಡ, ಆದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ, ಕುನಿಗನಹಳ್ಳಿ ಅಂಬೇಡ್ಕರ್ ಸಮುದಾಯದ ಭವನದ ಬಳಿ ಹೈಟೆಕ್ ಶೌಚಾಲಯ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರದ ಹಣ ಬಹುತೇಕವಾಗಿ ಭಾಗ್ಯಗಳಿಗೆ ವಿನಿಯೋಗವಾಗುತ್ತಿದೆ. ಇದರಿಂದಾಗಿ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬರುತ್ತಿಲ್ಲ ಎಂದರು.

ಆಧ್ಯತೆಯ ಆಧಾರದ ಮೇಲೆ ವಿವಿಧ ಕಾಮಗಾರಿಗಳಿಗೆ ಅನುದಾನ ನೀಡಲಾಗುತ್ತಿದೆ. ನಾನು ಪ್ರತಿನಿಧಿಸುವ ಕ್ಷೇತ್ರವು ಮೂರು ತಾಲೂಕುಗಳನ್ನು ಒಳಗೊಂಡಿದೆ. ನನ್ನ ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲೂ ರಸ್ತೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳು ಬಾಕಿ ಇವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲಾ ಕೆಲಸಗಳನ್ನು ಮುಗಿಸಲು ಪ್ರಾಮಾಣಿಕ ಪ್ರಯತ್ನ ಪಡುತ್ತೇನೆ ಎಂದು ಹೇಳಿದರು.

ಬಾಳ್ಳುಪೇಟೆಯಿಂದ ಹೊಸಕೋಟೆವರೆಗಿನ ರಸ್ತೆ ಕಾಮಗಾರಿಯನ್ನು ಮಳೆಗಾಲ ಮುಗಿದ ನಂತರ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಈ ಭಾಗದ ಇತರ ರಸ್ತೆಗಳನ್ನು ಅಭಿವೃದ್ದಿ ಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು


ಈ ಸಂಧರ್ಭದಲ್ಲಿ ಕುನಿಗನಹಳ್ಳಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ್, ಸೇರಿದಂತೆ ಇತರರು ಹಾಜರಿದ್ದರು. 8ಎಸ್.ಕೆ.ಪಿ.ಪಿ 5ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈಟೆಕ್ ಶೌಚಾಲಯವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments