Sunday, November 8, 2026
Homeಕ್ರೈಮ್Deviramma Betta: ದೇವಿರಮ್ಮ ಬೆಟ್ಟದಲ್ಲಿ ಅವಘಡ: ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಂಭೀರ ಗಾಯ

Deviramma Betta: ದೇವಿರಮ್ಮ ಬೆಟ್ಟದಲ್ಲಿ ಅವಘಡ: ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಂಭೀರ ಗಾಯ

Telegram Group
Join Now

 ಚಿಕ್ಕಮಗಳೂರು: ಜಿಲ್ಲೆಯ ಬಿಂಡಿಗ ದೇವಿರಮ್ಮನ ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಬರುತ್ತಿದ್ದಾರೆ. ಬೆಟ್ಟದ ತುದಿಯಲ್ಲಿ ಭಕ್ತರು ಏರಲು ಅನುಕೂಲವಾಗುವಂತೆ ಅಳವಡಿಸಿದ್ದ ಕಂಬಿ ಮುರಿದುಬಿದ್ದು ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಗೊಂಡವರ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಬೆಟ್ಟದ ಮೇಲ್ಭಾಗದಿಂದ ಕೆಳಕ್ಕೆ ಹೊತ್ತು ತಂದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಗಾಯಗೊಂಡವರನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿರಮ್ಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿರುವ ಹಿನ್ನೆಲೆ ಬೆಟ್ಟದಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಈ ನಡುವೆ ಬೆಟ್ಟ ಹತ್ತಲು ಸಹಾಯವಾಗಲೆಂದು ಹಾಕಿದ್ದ ಮರದ ಕಂಬಿ ಮುರಿದು ಅವಘಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!