ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಎಲ್ಲೆಡೆ ಸದ್ದು ಮಾಡುತ್ತಿದ್ದು ಈಗ ಸಿಎಂ ಅಂಗಳ ತಲುಪಿದೆ.
ಹೌದು ಬುಧವಾರ ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ ಸಲ್ಲಿಸಿದರು..
ನಂತರ ಮಾತನಾಡಿದ ಡಾ.ಸಿಎಸ್ ದ್ವಾರಕನಾಥ್ ಅವರು ಪ್ರಕರಣದ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇವೆ. ಹೂತಿಟ್ಟ ಶವಗಳ ಬಗ್ಗೆ ವ್ಯಕ್ತಿ ಒಬ್ಬರು ಹೇಳಿದ್ದಾರೆ. ಆ ವ್ಯಕ್ತಿಗೆ ಸೂಕ್ತ ಭದ್ರತೆ ನೀಡಲು ಸಿಎಂಗೆ ಮನವಿ ಮಾಡಲಾಗಿದೆ.
ಮಕ್ಕಳನ್ನು ಕಳೆದುಕೊಂಡ ಜನ ದೂರು ನೀಡಿದ್ದಾರೆ. ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಎಸ್ ಐಟಿ ರಚಿಸಬೇಕು ಎಂದು ಆಗ್ರಹಪಡಿಸಿದ್ದೇವೆ ಎಂದು ತಿಳಿಸಿದರು.
ಈ ಬಗ್ಗೆ ಪಬ್ಲಿಕ್ ಇಂಪ್ಯಾಕ್ಟ್ ಕೆಲ ದಿನಗಳಿಂದ ವರದಿ ಮಾಡಿತ್ತು.