ದಕ್ಷಿಣ ಕನ್ನಡ: ಧರ್ಮಸ್ಥಳ ವಿಚಾರದಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಈ ವೇಳೆ ವರದಿ ಮಾಡಲು ಹೋದ ಖಾಸಗಿ ವಾಹಿನಿ ವರದಿಗಾರ ಹಾಗೂ ಕ್ಯಾಮೆರಾಮ್ಯಾನ್ ಮೇಲೂ ಹಲ್ಲೆ ನಡೆಸಲಾಗಿದೆ.
ಧರ್ಮಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಶವಶೋಧ ವಿಚಾರದಲ್ಲಿ ಪರ-ವಿರೋಧ ಗುಂಪುಗಳ ನಡುವೆ ವಾಗ್ಯುದ್ಧ ನಡೀತಿದೆ. ಬುಧವಾರ ಸಂಜೆ ಈ ಜಟಾಪಟಿ ತಾರಕಕ್ಕೇರಿದೆ.
ಧರ್ಮಸ್ಥಳದ ಪಾಂಗಳದಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮೂವರು ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಧರ್ಮಸ್ಥಳ ಕ್ಷೇತ್ರ ಅಪಪ್ರಚಾರ ಸಹಿಸಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯರಿಗೆ ಧರ್ಮಸ್ಥಳದ ಭಕ್ತರು ಬೆಂಬಲ ಕೊಟ್ಟಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪೊಲೀಸ್ ಠಾಣೆ ಮುಂದೆ ಧರಣಿ ಕೂತಿದ್ದಾರೆ. ಕ್ಷೇತ್ರದ ತೇಜೋವಧೆ ಮಾಡುವವರನ್ನು ಬಂಧಿಸಿ ಎಂದು ಒತ್ತಾಯ ಮಾಡ್ತಿದ್ದಾರೆ. ಸ್ಥಳಕ್ಕೆ ಡಿಸಿ ಬರಬೇಕು ಅಂತ ಪಟ್ಟು ಹಿಡಿದಿದ್ದರು
ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ, ಧರ್ಮಸ್ಥಳ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕುಮಾರ್ ಭೇಟಿ ನೀಡಿದರು. ಧರ್ಮಸ್ಥಳದ ಗ್ರಾಮಸ್ಥರು, ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಪ್ರಮುಖರ ಜೊತೆ ಎಸ್‌ಪಿ ಮಾತುಕತೆ ನಡೆಸಿದರು.