Saturday, November 28, 2026
Homeಕ್ರೈಮ್ಕಾಫಿನಾಡಿನಲ್ಲಿ ಇದೆಂಥಾ ಪೈಶಾಚಿಕ ಕೃತ್ಯ: ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನಿಂದ ಕಾರ್ಮಿಕರ ಮೇಲೆ ದೌರ್ಜನ್ಯ

ಕಾಫಿನಾಡಿನಲ್ಲಿ ಇದೆಂಥಾ ಪೈಶಾಚಿಕ ಕೃತ್ಯ: ಬಂದೂಕು ಹಿಡಿದು ಕಾಫಿ ಎಸ್ಟೇಟ್ ಮಾಲೀಕನಿಂದ ಕಾರ್ಮಿಕರ ಮೇಲೆ ದೌರ್ಜನ್ಯ

Telegram Group
Join Now

ಚಿಕ್ಕಮಗಳೂರು: ಕಾಫಿ ಎಸ್ಟೇಟ್ ಮಾಲೀಕನೊಬ್ಬ ಬಂದೂಕು ಹಿಡಿದುಕೊಂಡು ಕಾರ್ಮಿಕರಿಗೆ ಬೆದರಿಸಿ ಹಲ್ಲೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಾಫಿ ಎಸ್ಟೇಟ್ ಮಾಲಿಕ ಭರತ್ ವಿರುದ್ಧ ಹೊರ ಜಿಲ್ಲೆಯ ವಲಸೆ ಕಾರ್ಮಿಕರು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕಾರ್ಮಿಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕಾರ್ಮಿಕರಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲಾಗಿದೆ. ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಬಂದೂಕು ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪ ಸಹ ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೋ ವೈರಲ್‌ ಆಗಿದೆ. ಕಾರ್ಮಿಕರ ರಕ್ಷಣೆಗೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!