ಚಿಕ್ಕಮಗಳೂರು: ಶೃಂಗೇರಿಯಲ್ಲಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಮತ್ತು ತಜ್ಞ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ.
ಹೌದು .. ಮಾಜಿ ಸಚಿವ ಡಿ.ಎನ್. ಜೀವರಾಜ್ ಅವರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಸಮರ್ಪಕ ವೈದ್ಯರ ನಿಯೋಜನೆ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಲಾಗಿದೆ.
ಇತ್ತೀಚೆಗೆ ಶೃಂಗೇರಿಯಲ್ಲಿ 100 ಬೆಡ್ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ರಾಜೇಗೌಡರು ತಿಳಿಸಿದ್ದರು ಆದರೆ ಇನ್ನೂ ಯಾವುದೇ ರೀತಿಯ ಕಾರ್ಯಗತವಾಗಿದೇ ಆ ಕೆಲಸ ಅಲ್ಲೇ ಉಳಿದಿದ್ದು ಇದು ಅಲ್ಲಿನ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ಇದನ್ನೆಲ್ಲಾ ಗಮನಿಸಿದ ಅಲ್ಲಿನ ಸ್ಥಳಿಯ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.
