Thursday, October 15, 2026
Homeಕ್ರೈಮ್Electric Scooter: ಸೇಫ್ ಅಲ್ವಾ : ಹೊತ್ತಿ ಉರಿದ 2 ಎಲೆಕ್ಟ್ರಿಕ್ ಸ್ಕೂಟರ್‌ಗಳು!

Electric Scooter: ಸೇಫ್ ಅಲ್ವಾ : ಹೊತ್ತಿ ಉರಿದ 2 ಎಲೆಕ್ಟ್ರಿಕ್ ಸ್ಕೂಟರ್‌ಗಳು!

Telegram Group
Join Now

ಚಿಕ್ಕಮಗಳೂರು: ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳು ಏಕಾಏಕಿ ಬೆಂಕಿಗೆ ಆಹುತಿಯಾಗಿರೋ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಚೆನ್ನಾಪುರ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ಚಂದ್ರಶೇಖರ್ ಎಂಬುವರು ಆರು ತಿಂಗಳ ಹಿಂದಷ್ಟೇ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ.

 

ತಡರಾತ್ರಿ ಭಾರೀ ಶಬ್ದ ಕೇಳಿಸಿದ ಬೆನ್ನಲ್ಲೇ ಸ್ಕೂಟರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿವೆ. ಎರಡು ಸ್ಕೂಟರ್‌ಗಳು ಸುಟ್ಟು ಭಸ್ಮವಾಗಿದ್ದು, ಬೆಂಕಿಯ ತೀವ್ರತೆಗೆ ಮನೆಯ ಗೋಡೆ ಹಾಗೂ ಕಾಂಪೌಂಡ್‌ಗೂ ಹಾನಿಯಾಗಿದೆ. ರಾತ್ರಿ ನಿಲ್ಲಿಸಿದ್ದ ಸ್ಕೂಟರ್‌ಗಳು ಬೆಳಗಾಗುವಷ್ಟರಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಸ್ಕೂಟರ್‌ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ತಿಳಿದುಬರಬೇಕಿದೆ. ಒಂದು ವೇಳೆ ಬೈಕ್ ಚಾಲನೆ ವೇಳೆ ಬೆಂಕಿ ಹೊತ್ತಿಕೊಂಡಿದ್ರೆ ಸವಾರರ ಜೀವಕ್ಕೂ ಆಪತ್ತು ಎದುರಾಗ್ತಾ ಇತ್ತು. ಸದ್ಯ ದೊಡ್ಡ ಅವಘಡ ತಪ್ಪಿದೆ ಅಂತಾ ಬೈಕ್ ಮಾಲೀಕರಾದ ಚಂದ್ರಶೇಖರ್ ನಿಟ್ಟುಸಿರು ಬಿಟ್ಟಿದ್ದಾರೆ. ಈ ಘಟನೆ ನೋಡಿದ್ರೆ ಎಲೆಕ್ಟ್ರಿಕ್ ಬೈಕ್ ಗಳು ಎಷ್ಟು ಸೇಫ್ ಎಂಬ ಪ್ರಶ್ನೆಯನ್ನ ಹುಟ್ಟುಹಾಕಿವೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!