Sunday, November 15, 2026
Homeಕ್ರೈಮ್Elephant Attack: ಬೇಲೂರಲ್ಲಿ ಕಾಡಾನೆ ದಾಳಿಗೆ ಮಹಿಳೆ ಬ*ಲಿ!

Elephant Attack: ಬೇಲೂರಲ್ಲಿ ಕಾಡಾನೆ ದಾಳಿಗೆ ಮಹಿಳೆ ಬ*ಲಿ!

Telegram Group
Join Now

ಬೇಲೂರು: ಹಾಸನ ಜಿಲ್ಲೆಯಲ್ಲಿ ಕಾಡಾನೆ ಮಾನವನ ಸಂಘರ್ಷ ಮುಂದುವರಿದಿದ್ದು ಕುರಿ ಮೇಯಿಸಲು ತೆರಳಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಸ್ಥಳದಲ್ಲೇ ಸಾವು. ಬಿಕ್ಕೋಡು ಹೋಬಳಿ ವ್ಯಾಪ್ತಿಯ ಚೌಡನಹಳ್ಳಿಯಲ್ಲಿ ದಾರುಣ ಘಟನೆ ನಡೆದಿದೆ.

ಕಾಡಾನೆಗಳ ಹಾವಳಿ ತಡೆಗೆ ಆಗ್ರಹಿಸಿ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ. ತಾಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯ ಚೌಡನಹಳ್ಳಿ ಗ್ರಾಮದ ಬಳಿ ಕುರಿಗಳನ್ನು ಮೇಯಿಸಿಕೊಂಡು ಬರುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಚೌಡನಹಳ್ಳಿ ಗ್ರಾಮದ ನಿವಾಸಿ ಜಯಮ್ಮ (45) ಮೃತ ದುರ್ದೈವಿ. ಎಂದಿನಂತೆ ಜಯಮ್ಮ ಅವರು ತಮ್ಮ ಕುರಿಗಳನ್ನು ಮೇಯಿಸಲು ಸಮೀ ಪದ ತೋಟದಂಚಿನ ಪ್ರದೇಶಕ್ಕೆ ತೆರಳಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿದೆ.

ಆನೆಯ ದಾಳಿಯ ತೀವ್ರತೆಗೆ ಜಯಮ್ಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾ ರಿಗಳು ಹಾಗೂ ಅರೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!