Wednesday, November 25, 2026
Homeಜಿಲ್ಲಾಸುದ್ದಿElephant Conflict: ಮೂಡಿಗೆರೆ ಟೌನ್‌ ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಶಿವಲಿಂಗೇಗೌಡರ ರಾಜೀನಾಮೆಗೆ ಆಗ್ರಹ!

Elephant Conflict: ಮೂಡಿಗೆರೆ ಟೌನ್‌ ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಶಿವಲಿಂಗೇಗೌಡರ ರಾಜೀನಾಮೆಗೆ ಆಗ್ರಹ!

Telegram Group
Join Now

ಮೂಡಿಗೆರೆ: ಹಾಸನದಿಂದ ಚಿಕ್ಕಮಗಳೂರು ಜಿಲ್ಲೆಗೆ ಕಾಡಾನೆಗಳನ್ನು ಸ್ಥಳಾಂತರ ಮಾಡುವ ‘ಆಪರೇಷನ್ ಗಜ’ ಕಾರ್ಯಾಚರಣೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಇದರ ಹಿನ್ನೆಲೆ ಇಂದು ಮೂಡಿಗೆರೆ ತಾಲೂಕು ಬಂದ್‌ಗೆ ಕರೆ ನೀಡಲಾಗಿದ್ದು, ಬೆಳಗಿನಿಂದಲೇ ಮೂಡಿಗೆರೆ ತಾಲೂಕಿನಲ್ಲಿ ಅಂಗಡಿ, ಮುಂಗಟ್ಟುಗಳು ಬಂದ್‌ ಮಾಡಲಾಗಿದ್ದು, ಬಹುತೇಕ ತಾಲೂಕು ಸ್ಥಬ್ಧವಾಗಿದೆ. ತತ್ಕೋಳ ಅರಣ್ಯದ ಮೂಲಕ ಕಾಡಾನೆಗಳನ್ನು ಸ್ಥಳಾಂತರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಆಪರೇಷನ್ ಕಾಡಾನೆ ಕಾರ್ಯಾಚರಣೆಗೆ ಮೂಡಿಗೆರೆ ಜನರು ದೊಡ್ಡಮಟ್ಟದಲ್ಲಿ ಇದೀಗ ವಿರೋಧ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಶಿವಲಿಂಗೇಗೌಡರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಪಟ್ಟು ಹಿಡಿದಿದ್ದಾರೆ.

ಅರಣ್ಯ ಇಲಾಖೆಯವರು ಅವೈಜ್ಞಾನಿಕ ಯೋಜನೆಗಳಿಗಾಗಿ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಆದರೆ ಆನೆಗಳಿಗಾಗಿ ಏನು ಮಾಡಿದ್ದಾರೆ. ಇನ್ನು, ಈ ಬಂದ್‌ಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪಕ್ಷಾತೀತವಾಗಿಯೂ ಈ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಿಂದ 56 ಆನೆಗಳನ್ನು ಭದ್ರಾ ಹುಲಿ ಸಂರಕ್ಷಿತ ಪ್ರದೇಶದತ್ತ ಓಡಿಸುವ ಕಾರ್ಯಾಚರಣೆಯು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಮೂಡಿಗೆರೆ ತಾಲೂಕಿನ ಗ್ರಾಮಗಳಲ್ಲಿ ಭೀತಿ ಆವರಿಸಿದ್ದು, ನಿವಾಸಿಗಳು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಕಾಫಿ ಕೊಯ್ಲು ಕೆಲಸಗಳು ಸ್ಥಗಿತಗೊಂಡಿವೆ ಮತ್ತು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!