Tuesday, September 8, 2026
Homeಜಿಲ್ಲಾಸುದ್ದಿElephant Task Force: ಬೇಲೂರಲ್ಲಿ ಏಕಾಏಕಿ ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿ ಸಲಗ

Elephant Task Force: ಬೇಲೂರಲ್ಲಿ ಏಕಾಏಕಿ ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದ ಒಂಟಿ ಸಲಗ

Telegram Group
Join Now

ಹಾಸನ: ಇಟಿಎಫ್ ಮದದಲ್ಲಿದ್ದ ಒಂಟಿ ಸಲಗವೊಂದು ಅಟ್ಟಾಡಿಸಿದ ಘಟನೆ ಬೇಲೂರು ತಾಲೂಕಿನ ಗಂಗಾವರ ಗ್ರಾಮದಲ್ಲಿ ನಡೆದಿದೆ.

ಕಾಡಾನೆ ರಸ್ತೆ ದಾಟುವಾಗ ಇಟಿಎಫ್ ಸಿಬ್ಬಂದಿ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿಕೊಂಡು ನಿಂತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ಇಟಿಎಫ್‌ ಸಿಬ್ಬಂದಿಯನ್ನು ಅಟ್ಟಾಡಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗಂಗಾವರ ಸುತ್ತಮುತ್ತಲ ಗ್ರಾಮಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಡಾನೆ ರಸ್ತೆ ದಾಟುತ್ತಿದ್ದ ವೇಳೆ ಎರಡು ಕಡೆಗಳಲ್ಲಿ ಸಾರಿಗೆ ಬಸ್, ಅರಣ್ಯ ಇಲಾಖೆ ಜೀಪ್ ಸೇರಿದಂತೆ ಇತರೆ ವಾಹನಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಜನರಿದ್ದ ಕಡೆಗೆ ಒಂಟಿಸಲಗ ನುಗ್ಗಿದ್ದು ಇಟಿಎಫ್ ಸಿಬ್ಬಂದಿ ಹಾಗೂ ಜನರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

ಕಾಡಾನೆಗಳ ಹಾವಳಿಯಿಂದ ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ಕಾಡಾನೆಗಳ ಚಲನವಲನದ ಬಗ್ಗೆ ಇಟಿಎಫ್ ಸಿಬ್ಬಂದಿ ಮೈಕ್ ಮೂಲಕ ಅನೌನ್ಸ್ ಮಾಡಿ ಸ್ಥಳೀಯರಿಗೆ ಎಚ್ಚರಿಕೆ ನೀಡುತ್ತಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!