ಮಂಗಳೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.47 ವರ್ಷದ ಮಹಿಳೆ ತಮ್ಮ ಮೇಲೆ ಅರುಣ್ ಕುಮಾರ್ ಪುತ್ತಿಲ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನು ಈಗಾಗಲೇ ತಮ್ಮ ವಿರುದ್ಧದ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆಯೂ ಕೆಲವು ದಿನಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ನ್ಯಾಯಾಲಯದಿಂದ ನಿಷೇಧಾಜ್ಞೆ ತಂದಿದ್ದರು.