ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಕ್ಯಾಂಟರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮಕ್ಯಾಂಟರ್ ನಿಂದ ಜಿಗಿದು ಪ್ರಾಣ ಉಳಿಸಿಕೊಂಡ ಚಾಲಕ. ಇದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಾಂತವೇರಿ ಘಾಟ್ ಬಳಿ ನಡೆದಿದೆ.
ಹೌದು .. ಬೆಂಕಿ ನಂದಿಸುವಾಗ ಟೈಯರ್ ಬ್ಲಾಸ್ಟ್ ಆಗಿದ್ದು ಇದರ ಪರಿಣಾಮ ಅಗ್ನಿಶಾಮಕ ಸಿಬ್ಬಂದಿ ಶಿವಪ್ರಸಾದ್ ಕೈ ಮುಖ, ಎದೆ ಭಾಗಕ್ಕೆ ಗಾಯವಾಗಿದ್ದು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂಪೂರ್ಣ ಸುಟ್ಟು ಭಸ್ಮವಾದ ಕ್ಯಾಂಟರ್ ವಾಹನ ತರೀಕೆರೆಯಿಂದ ಚಿಕ್ಕಮಗಳೂರು ನಗರಕ್ಕೆ ಬರುತ್ತಿದ್ದ ಕ್ಯಾಂಟರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
