Chikkamagaluru: ಕಾಫಿನಾಡುನಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದಿದ್ದ ಕಾಫಿನಾಡಿನ ಜನರಿಗೆ ವರುಣ ಕೊಂಚ ತಂಪೆರೆದಿದ್ದಾನೆ. ಚಿಕ್ಕಮಗಳೂರಿನ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಜಿಲ್ಲೆಯ ಮುತ್ತೋಡಿ, ಕೊಳಗಾಮೆ, ಮೇಲಿನ ಹುಲುವತ್ತಿ ಸೇರಿದಂತೆ ಹಲವು ಕಡೆ ಮಳೆಯಾಗಿದೆ.

ಇನ್ನು ಬಿಸಿಲಿನ ಹೊಡೆತದಿಂದ ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದ ಬೆಳೆಗಾರರು ಮಳೆ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
