Tuesday, July 7, 2026
Homeಜಿಲ್ಲಾಸುದ್ದಿH. S. Puttarangath : ಬೇಲೂರು ಕ್ಷೇತ್ರದ ಮಾಜಿ ಶಾಸಕ ಹೆಚ್. ಎಸ್. ಪುಟ್ಟರಂಗನಾಥ್ ವಿಧಿವಶ!

H. S. Puttarangath : ಬೇಲೂರು ಕ್ಷೇತ್ರದ ಮಾಜಿ ಶಾಸಕ ಹೆಚ್. ಎಸ್. ಪುಟ್ಟರಂಗನಾಥ್ ವಿಧಿವಶ!

Telegram Group
Join Now

ಹಾಸನ: ಬೇಲೂರು ಕ್ಷೇತ್ರದ ಮಾಜಿ ಶಾಸಕ ಹೆಚ್. ಎಸ್. ಪುಟ್ಟರಂಗನಾಥ್ (89) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

1999ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್‌. ಎಸ್. ಪುಟ್ಟರಂಗನಾಥ್ ಅವರು ಕಾಂಗ್ರೆಸ್‌ನ ಹೆಚ್. ಕೆ. ಕುಮಾರಸ್ವಾಮಿ ಅವರನ್ನು ಸೋಲಿಸಿ ಮೊದಲ ಬಾರಿಗೆ ಬೇಲೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಮೊದಲ ಶಾಸಕರಾಗಿದ್ದ ಅವರು 1999ರಿಂದ 2004ರವರೆಗೆ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಸೇವೆ ಹಾಗೂ ಜನಪರ ಕಾರ್ಯಗಳ ಮೂಲಕ ಜನರ ಮೆಚ್ಚುಗೆ ಪಡೆದಿದ್ದ ಪುಟ್ಟರಂಗನಾಥ್ ಅವರು ಬೇಲೂರು ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಇಂದು ಬೇಲೂರು ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments