Tuesday, July 14, 2026
Homeಜಿಲ್ಲಾಸುದ್ದಿCompetitive Exam Training Workshop: ಚಿಕ್ಕಮಗಳೂರಿನಲ್ಲಿ ಜುಲೈ 16 & 17ಕ್ಕೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ...

Competitive Exam Training Workshop: ಚಿಕ್ಕಮಗಳೂರಿನಲ್ಲಿ ಜುಲೈ 16 & 17ಕ್ಕೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ

Telegram Group
Join Now

ಚಿಕ್ಕಮಗಳೂರು : ಕರ್ನಾಟಕ ರಾಜ್ಯದಲ್ಲಿ ಸುಮಾರು 5,000ಕ್ಕೂ ಅಧಿಕ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್, ಡಿಎಆರ್ ಕಾನ್ಸ್‌ಟೇಬಲ್, ಫಾರೆಸ್ಟ್ ವಾಚರ್, ಗ್ರಾಮ ಆಡಳಿತ ಅಧಿಕಾರಿ (VAO), ಭೂಮಾಪಕರ ಹುದ್ದೆಗಳು, ಕ್ರೈಸ್ ಸಂಸ್ಥೆಯಲ್ಲಿ ಹುದ್ದೆಗಳು ಹಾಗೂ ಇತರೆ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಜುಲೈ 16 ಹಾಗೂ 17ರಂದು ಸಮಯ ಬೆಳಿಗ್ಗೆ 9 ರಿಂದ ಸಂಜೆ 5 ರತನಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜಾಗುತ್ತಿರುವ ಅಭ್ಯರ್ಥಿಗಳಿಗಾಗಿ ಎರಡು ದಿನಗಳ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಅಭ್ಯರ್ಥಿಗಳಿಗೆ ಸಮಗ್ರ ಮಾರ್ಗದರ್ಶನ ಹಾಗೂ ಪರೀಕ್ಷಾ ಸಿದ್ಧತೆಗೆ ಅನುಕೂಲವಾಗುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಲೈಫ್ ಲೈನ್ ಫೀಡ್ಸ್ ಇಂಡಿಯಾ ಲಿಮಿಟೆಡ್, ಚಿಕ್ಕಮಗಳೂರು ಅವರ ಪ್ರಾಯೋಜಕತ್ವದಲ್ಲಿ ಹಾಗೂ ವಿ-ಶೈನ್ ಕೋಚಿಂಗ್ ಸೆಂಟರ್, ಕೋಟ ಇವರ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಕಾರ್ಯಕ್ರಮವನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಉಪಸ್ಥಿತರಿರುತ್ತಾರೆ. ಅಲ್ಲದೆ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮಧ್ಯಾಹ್ನದ ಊಟ ಸೇರಿದಂತೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸದರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಶ್ರೀ ಹರೀಶ್ ಕುಮಾರ್ ಶೆಟ್ಟಿ – 99800 40551, ವಿವೇಕ್

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments