Wednesday, September 16, 2026
Homeಜಿಲ್ಲಾಸುದ್ದಿಮೂಡಿಗೆರೆಯಲ್ಲಿ ಸೆ.16ರಂದು ಉಚಿತ ನೇತ್ರ ತಪಾಸಣಾ & ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ!

ಮೂಡಿಗೆರೆಯಲ್ಲಿ ಸೆ.16ರಂದು ಉಚಿತ ನೇತ್ರ ತಪಾಸಣಾ & ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ!

Telegram Group
Join Now

ಮೂಡಿಗೆರೆ: ತಾಲೂಕಿನ ಛತ್ರ ಮೈದಾನದಲ್ಲಿ ಸೆ.16ರಂದು ಉಚಿತ ನೇತ್ರ ತಪಾಸಣಾ ಹಾಗೂ ನೇತ್ರ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ, ಪ್ರಶಾಂತ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ.

ಛತ್ರ ಮೈದಾನ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುವ ಶಿಬಿರದಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆಗೆ ಆಯ್ಕೆ ಹಾಗೂ ಮಸೂರ (IOL) ಅಳವಡಿಕೆ ಸೇರಿದಂತೆ ಅಗತ್ಯ ನೇತ್ರ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗುವುದು.

ಸೆ.16ರಂದು ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ದತ್ತ ಮೈದಾನ, ಮೂಡಿಗೆರೆಯಲ್ಲಿ ಶಿಬಿರ ನಡೆಯಲಿದೆ. ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ ರೋಗಿಗಳನ್ನು ಶಿಬಿರದ ದಿನವೇ ವೈದ್ಯರೊಂದಿಗೆ ಕರೆದೊಯ್ಯಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ನೇತ್ರ ಸಮಸ್ಯೆ ಇರುವವರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!