ಆಲೂರು : ಚಲವಾದಿ ಮಹಾಸಭಾ ವತಿಯಿಂದ ಛಲವಾದಿ ಮುಖಂಡ, ಜಿಲ್ಲಾ ಕಾಂಗ್ರೆಸ್ ನಾಯಕ ಸಕಲೇಶಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುರಳಿ ಮೋಹನ್ ರವರ ಹುಟ್ಟು ಹಬ್ಬದ ಅಂಗವಾಗಿ ಜುಲೈ 22ರ ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಛಲವಾದಿ ಮಹಾಸಭಾಧ್ಯಕ್ಷ ಲೋಹಿತ್ ಅವರು ತಿಳಿಸಿದರು.
ಪಟ್ಟಣದಲ್ಲಿರುವ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಛಲವಾದಿ ಮಹಾಸಭಾಧ್ಯಕ್ಷ ಲೋಹಿತ್ ಕುಮಾರ್ ಅವರು ಮಾತನಾಡಿ, ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಸನದ ಮಹಾಲಕ್ಷ್ಮಿ ಮಂಜಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನುರಿತ ವೈದ್ಯರುಗಳಿಂದ ತಪಾಸಣೆ ನಡೆಸಲಾಗುವುದು. ತಾಲೂಕಿನ ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಹಾಗೆ ಪ್ರಧಾನ ಕಾರ್ಯದರ್ಶಿ ಬಿ ಎಂ ಹರೀಶ್ ಅವರು ಮಾತನಾಡಿ ಕಾಂಗ್ರೆಸ್ ನಾಯಕ ಮುರಳಿ ಮೋಹನ್ ಅವರು 42ನೇ ಹುಟ್ಟುಹಬ್ಬದ ಪ್ರಯುಕ್ತ ಹಾಸನದ ಎಂ ಎಂ ಎಂ ಆಸ್ಪತ್ರೆಯ ಸಹಯೋಗದಲ್ಲಿ ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಮೂಳೆ ರೋಗ, ಮೆದುಳು ಮತ್ತು ಬೆನ್ನು ಮೂಳೆ ರೋಗ, ಸ್ತ್ರೀರೋಗಗಳ ಬಗ್ಗೆ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತದೆ, ಎಲ್ಲರೂ ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದು ಹೇಳಿದರು