Monday, August 10, 2026
Homeಜಿಲ್ಲಾಸುದ್ದಿGeetha Ranjan: ಯೋಗದಿಂದ ಆರೋಗ್ಯಕರ ಬದುಕು ಸಾಧ್ಯ: ಗೀತಾ ರಂಜನ್ ಅಜಿತ್

Geetha Ranjan: ಯೋಗದಿಂದ ಆರೋಗ್ಯಕರ ಬದುಕು ಸಾಧ್ಯ: ಗೀತಾ ರಂಜನ್ ಅಜಿತ್

Telegram Group
Join Now

ಮೂಡಿಗೆರೆ : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಲ್ಲಿನ ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ಯೋಗ ದಿನವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ನಿರ್ದೇಶಕರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.

ಶಾಲಾ ಆವರಣದಲ್ಲಿ ಸಮೂಹ ಯೋಗಾಭ್ಯಾಸ ನಡೆಸುವ ಮೂಲಕ ಯೋಗದ ಮಹತ್ವವನ್ನು ಸಾರಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಪಿ.ಎನ್. ಜಗದೀಶ್ ಭಟ್, ಶ್ರೀಮತಿ ಗೀತಾ ಅಜಿತ್, ಶ್ರೀ ಮನೋಜ್ ಕುಮಾರ್, ಶ್ರೀ ಹಂಝ ಎಂ.ಎ. ಹಾಗೂ ಶ್ರೀ ಮೊಹಮ್ಮದ್ ಇಮ್ರಾನ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗೀತಾ ರಂಜನ್ ಅಜಿತ್, “ಯೋಗವು ಆರೋಗ್ಯಕರ ಜೀವನಕ್ಕೆ ಅತ್ಯಗತ್ಯ. ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು,” ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments