Thursday, March 26, 2026
Homeಜಿಲ್ಲಾಸುದ್ದಿಗ್ಯಾರಂಟಿ ಯೋಜನೆ ಎಸ್.ಸಿ.ಪಿ / ಟಿ.ಎಸ್.ಪಿ ಹಣ ವಿಧಾನಸಭೆ ಸಿಮೆಂಟ್ ಮಂಜು ಗುಡುಗು

ಗ್ಯಾರಂಟಿ ಯೋಜನೆ ಎಸ್.ಸಿ.ಪಿ / ಟಿ.ಎಸ್.ಪಿ ಹಣ ವಿಧಾನಸಭೆ ಸಿಮೆಂಟ್ ಮಂಜು ಗುಡುಗು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರುವ ಎಸ್.ಸಿ.ಪಿ / ಟಿ.ಎಸ್.ಪಿ ಹಣವನ್ನು ಕಳೆದ ಮೂರು ಬಜೆಟ್ ಗಳಲ್ಲೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯವೆಸಗಿದೆ ಎಂದು ಸದನದಲ್ಲಿ ಸಿಮೆಂಟ್ ಮಂಜು ಪ್ರಸ್ತಾಪಿಸಿದರು.

ಈ ಕುರಿತು ಗುರುವಾರ ಸದನದಲ್ಲಿ ಮಾತನಾಡಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪರಿಸ್ಥಿತಿಯನ್ನು ವಿವರಿಸಿ, ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಕಾರಣಕ್ಕೂ ಎಸ್.ಸಿ.ಪಿ /ಟಿ.ಎಸ್.ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಬಾರದು ಎಂದು ಒತ್ತಾಯಿಸಲಾಯಿತು.

ದಲಿತರಿಗೆ ಅನ್ಯಾಯವಾದರೆ ಭಾರತೀಯ ಜನತಾ ಪಾರ್ಟಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!