ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಮೊದಲ ದಿನವೇ ಭಕ್ತರ ದಂಡು ಸಾಗರೋಪಾದಿಯಾಗಿ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. 300 ರೂ. ವಿಶೇಷ ದರ್ಶನದ ಸಾಲಿನಲ್ಲಿ ಸುಮಾರು ಎರಡು ಕಿಲೋ ಮೀಟರ್ವರೆಗೂ ಕ್ಯೂನಲ್ಲಿ ಭಕ್ತರು ದೇವಿ ದರ್ಶನಕ್ಕಾಗಿ ಕಾದು ನಿಂತಿದ್ದಾರೆ.
1000 ರೂ. ವಿಶೇಷ ದರ್ಶನದ ಸಾಲು ಸಂಪೂರ್ಣ ಭರ್ತಿಯಾಗಿದೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಪಡೆದವರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 10:30 ರಿಂದ 12:30ರ ವರೆಗೆ ಪ್ರೋಟೋಕಾಲ್ನಲ್ಲಿ ಬರುವವರಿಗೆ (VIP) ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದರಿಂದ ಸ್ಥಳದಲ್ಲಿ ಎಸ್ಪಿ ಶುಭನ್ವಿತಾ ಅವರು ಮೊಕ್ಕಾಂ ಹೂಡಿದ್ದಾರೆ. ಧರ್ಮ ದರ್ಶನ, 1000 ರೂ. 300 ರೂ. ನ ವಿಶೇಷ ದರ್ಶನದ ಸಾಲುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಾವುದೇ ನೂಕುನುಗ್ಗಲು ಉಂಟಾಗದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.
