Thursday, October 29, 2026
Homeಜಿಲ್ಲಾಸುದ್ದಿHasanamba Jatre 2026: ವರ್ಷದ ಬಳಿಕ ತೆರೆದ ಹಾಸನಾಂಬೆ ದೇಗುಲದ ಬಾಗಿಲು: ನಾಳೆ ಬೆಳಗ್ಗೆ 6...

Hasanamba Jatre 2026: ವರ್ಷದ ಬಳಿಕ ತೆರೆದ ಹಾಸನಾಂಬೆ ದೇಗುಲದ ಬಾಗಿಲು: ನಾಳೆ ಬೆಳಗ್ಗೆ 6 ಗಂಟೆಯಿಂದ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ

Telegram Group
Join Now

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಪ್ರಸಿದ್ಧ ಹಾಸನಾಂಬ ದೇವಿಯ ದೇವಾಲಯದ ಗರ್ಭಗುಡಿಯನ್ನು ಪುರಾತನ ಸಂಪ್ರದಾಯದಂತೆ ತೆರೆಯಲಾಗಿದೆ. ಆಶ್ವಯುಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರದಂದು ಸಂಪ್ರದಾಯದಂತೆ ಇಂದು ಮಧ್ಯಾಹ್ನ 12:28ಕ್ಕೆ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿದೆ.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಮುಜರಾಯಿ ಸಚಿವ ಬಸವಂತಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜ್ಯದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿರುವ ಹಾಸನಾಂಬ ದೇವಿಯ ದರ್ಶನೋತ್ಸವವು ರಾಜ್ಯದ ವಿವಿಧ ಭಾಗಗಳಿಂದ ಬರುವ ಭಕ್ತರನ್ನು ಆಕರ್ಷಿಸುತ್ತಿದೆ. ಭಕ್ತರು ತಾಯಿಯ ದರ್ಶನ ಪಡೆದು ಆಶೀರ್ವಾದ ಪಡೆಯಲು ಉತ್ಸುಕರಾಗಿದ್ದಾರೆ.

 ಇಂದು ಗರ್ಭಗುಡಿ ಬಾಗಿಲು ತೆರೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿರುವುದಿಲ್ಲ. ನಾಳೆ (ಅಕ್ಟೋಬರ್ 30ರ) ಬೆಳಗ್ಗೆ 6 ಗಂಟೆಯಿಂದ ನವೆಂಬರ್ 10ರವರೆಗೆ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತವು ₹1,000 ಮತ್ತು ₹300ರ ವಿಶೇಷ ದರ್ಶನದ ಟಿಕೆಟ್ ವ್ಯವಸ್ಥೆ ಮಾಡಿದೆ.

ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೂರು ಪಾಳಿಗಳಲ್ಲಿ 2,000ಕ್ಕೂ ಅಧಿಕ ಪೊಲೀಸರು ಹಾಗೂ ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಧರ್ಮದರ್ಶನದ ಸಾಲಿನಲ್ಲಿ ನೂಕುನುಗ್ಗಲು ಉಂಟಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ದೇವಾಲಯದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಮಳೆಯಿಂದ ಭಕ್ತರಿಗೆ ತೊಂದರೆಯಾಗದಂತೆ ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರಿಗೆ ಉಚಿತ ದೊನ್ನೆ ಪ್ರಸಾದ ವಿತರಣೆಯ ವ್ಯವಸ್ಥೆಯನ್ನೂ ಜಿಲ್ಲಾಡಳಿತ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!