Tuesday, February 10, 2026
Homeಕ್ರೈಮ್ಹಾಸನ: ಸಿಎಂ ಸೇರಿ 224 ಜನ MLA's ಅನರ್ಹವಾಗುವುದು ಖಚಿತ: ವಕೀಲ ದೇವರಾಜೇಗೌಡ ಹೊಸ ಬಾಂಬ್‌

ಹಾಸನ: ಸಿಎಂ ಸೇರಿ 224 ಜನ MLA’s ಅನರ್ಹವಾಗುವುದು ಖಚಿತ: ವಕೀಲ ದೇವರಾಜೇಗೌಡ ಹೊಸ ಬಾಂಬ್‌

ಹಾಸನ: ಮುಖ್ಯಮಂತ್ರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 224 ಜನ ಎಂಎಲ್‌ಎಗಳು ಅನರ್ಹವಾಗುವುದು ಖಚಿತವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೊಸ ಬಾಂಬ್‌ ಸಿಡಿಸಿದರು.

ಸುಪ್ರೀಂ ಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಆಗಿರುವ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಘೋಷಣೆಯ ಪ್ರಮುಖ ರೂವಾರಿಗಳಾಗಿದ್ರು. ಗ್ಯಾರಂಟಿಗಳನ್ನ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಭಾಗ್ಯಗಳನ್ನ ಕೊಡುತ್ತಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ಎಲೆಕ್ಷನ್ ಪಿಟಿಷನ್ ಸಲ್ಲಿಕೆ ಮಾಡಿದ್ದೆವು ಎಂದು ತಿಳಿಸಿದರು.

ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಿಯಾದ ಅಂಶಗಳ ಮೇಲೆ ಬೆಳಕು ಚೆಲ್ಲದೇ ನಮ್ಮ ಪಿಟಿಷನ್ ವಜಾ ಮಾಡಿದ್ರು, ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅಪಿಲ್ ಫೈಲ್ ಮಾಡಿದ್ದೆವು ಎಂದರು.

 ಅತೀ ಶೀಘ್ರದಲ್ಲೇ ಉಚಿತ ಗ್ಯಾರೆಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ನಂಬಿಕೆಯಿದೆ ಎರಡು ವಾರದಲ್ಲಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್‌ಗೆ ಹಾಜರಾಗಬೇಕಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!