Monday, August 17, 2026
Homeಕ್ರೈಮ್ಹಾಸನ: ಆಟವಾಡುತ್ತಿದ್ದ ವೇಳೆ ಆಯತಪ್ಪಿ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು!

ಹಾಸನ: ಆಟವಾಡುತ್ತಿದ್ದ ವೇಳೆ ಆಯತಪ್ಪಿ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು!

Telegram Group
Join Now

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಎಡನ್ ಸ್ವೀವ್ (4) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಎಡನ್ ಸ್ವೀವ್ ಆಟವಾಡುತ್ತಿದ್ದ. ಈ ವೇಳೆ ಪೋಷಕರು ಮನೆಯೊಳಗಿದ್ದರು. ಸ್ವಲ್ಪ ಹೊತ್ತಿನ ಬಳಿಕ ಮನೆಯಿಂದ ಹೊರ ಬಂದ ಪೋಷಕರು ಮಗುವಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ನೀರಿನ ಸಂಪ್ ಬಳಿ ಮಗುವಿನ ಸೈಕಲ್ ಬಿದ್ದಿದ್ದು ಸಂಪ್ ಪರಿಶೀಲಿಸಿದಾಗ ಶವ ನೀರಿನಲ್ಲಿ ತೇಲುತ್ತಿರುವುದು ಕಾಣಿಸಿದೆ.

ಕೂಡಲೇ ಹಾಸನ ನಗರದ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments