Wednesday, August 12, 2026
Homeಕ್ರೈಮ್ಹಾಸನ: ಸೈಕಲ್‌ಗೆ ಕಾರು ಡಿಕ್ಕಿ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ದುರ್ಮರಣ!

ಹಾಸನ: ಸೈಕಲ್‌ಗೆ ಕಾರು ಡಿಕ್ಕಿ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ದುರ್ಮರಣ!

Telegram Group
Join Now

ಹಾಸನ: ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ.

ಮೃತನನ್ನು ಸಂಜು (16) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸಂಜು ಹೊನ್ನಶೆಟ್ಟಿಹಳ್ಳಿಯ ಗ್ರಾಮದ ಗಿರೀಶ್ ಅವರ ಪುತ್ರ ಎಂದು ತಿಳಿದು ಬಂದಿದೆ. ಈತ ಅಜ್ಜಿ ಮನೆಯಿಂದ ಕಾಲೇಜಿಗೆ ಸೈಕಲ್‌ನಲ್ಲಿ ತೆರಳುತ್ತಿದ್ದ. ರಸ್ತೆ ಕ್ರಾಸ್ ಮಾಡುವ ವೇಳೆ ವೇಗವಾಗಿ ಬಂದ ಕಾರು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments