Sunday, August 9, 2026
Homeಕ್ರೈಮ್ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ: ಪಿಕಪ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು!

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ: ಪಿಕಪ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು!

Telegram Group
Join Now

ಹಾಸನ: ಹೊಸ ವರ್ಷದ ಮೊದಲ ದಿನವೇ ಭೀಕರ ದುರಂತ ನಡೆದಿದ್ದು ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಬುಧವಾರ ರಸ್ತೆ ಅಪಘಾತ ಸಂಭವಿಸಿದ್ದು, ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳಾದ ಶಬ್ಬೀರ್ (55), ತಿಮ್ಮಣ್ಣ (53) ಹಾಗೂ ಸಂಜಯ್ (45) ಮೃತರು. ಅಪಘಾತದಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಅಡಿಕೆ ಕಟಾವು ಕಾರ್ಯ ಮುಗಿಸಿ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ, ವಾಹನದ ಟೈರ್ ಏಕಾಏಕಿ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪಿಕಪ್ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹಾಸನ ಮೂಲದ ನೌಶದ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಾದ ತಿಮ್ಮಣ್ಣ ಮತ್ತು ಸಂಜಯ್ ಅವರ ಮೃತದೇಹಗಳನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ, ಶಬ್ಬೀರ್ ಅವರ ಮೃತದೇಹವನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಬಾಣಾವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments