Sunday, August 16, 2026
Homeಕ್ರೈಮ್ಹಾಸನ: ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ: ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

Telegram Group
Join Now

ಹಾಸನ: ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೋಪಾಲ್ (27), ದೀಪು (24) ಮೃತ ದಂಪತಿ. ಭಾನುವಾರ ದಂಪತಿ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು. ಬಟ್ಟೆ ತೊಳೆಯುವಾಗ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾಳೆ. ಪತ್ನಿಯನ್ನು ರಕ್ಷಿಸಲು ಪತಿ ಗೋಪಾಲ್ ನಾಲೆಗೆ ಇಳಿದಿದ್ದಾರೆ. ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದರಿಂದ ನೀರಿನಲ್ಲಿ ಮುಳುಗಿ ದಂಪತಿ ಸಾವನ್ನಪ್ಪಿದ್ದಾರೆ.

ದಂಪತಿ ಮನೆಗೆ ಬಾರದಿದ್ದರಿಂದ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ನಂತರ ನಾಲೆ ಬಳಿ ನೋಡಿದಾಗ ಬಟ್ಟೆಗಳು ದಡದಲ್ಲಿತ್ತು. ಈ ಹಿನ್ನೆಲೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಅಗ್ನಿಶಾಮಕದಳ ಸಿಬ್ಬಂದಿ ನಾಲೆಯಲ್ಲಿ ಶೋಧಕಾರ್ಯ ನಡೆಸಿದ ವೇಳೆ ಪತಿ ಗೋಪಾಲ್ ಮೃತದೇಹ ನಾಲೆಯಲ್ಲಿ ಪತ್ತೆಯಾಗಿದೆ. ಪತ್ನಿ ದೀಪು ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments