Tuesday, April 7, 2026
Homeಜಿಲ್ಲಾಸುದ್ದಿಹಾಸನ: ಗ್ಯಾಸ್ ಏಜೆನ್ಸಿಗಳು ಗ್ರಾಹಕರೊಂದಿಗೆ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ

ಹಾಸನ: ಗ್ಯಾಸ್ ಏಜೆನ್ಸಿಗಳು ಗ್ರಾಹಕರೊಂದಿಗೆ ಸ್ಪಂದಿಸಲು ಜಿಲ್ಲಾಧಿಕಾರಿ ಸೂಚನೆ

ಹಾಸನ: ಗೃಹ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳನ್ನು ವಿತರಣೆ ಮಾಡುವ ಏಜೆನ್ಸಿಗಳು ಸ್ಥಳೀಯವಾಗಿ ಯಾವುದೇ ಸಮಸ್ಯೆಗಳು ಉದ್ಬವಿಸದಂತೆ ಎಚ್ಚರಿಕೆವಹಿಸಿ ಗ್ರಾಹಕರೊಂದಿಗೆ ಸ್ಪಂದಿಸಿ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಾತನಾಡಿದ ವಾಣಿಜ್ಯ/ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ವಿತರಕರು ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಮಾಡುವಂತೆ ಸೂಚಿಸಿದರು.

ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗೆ ಬುಕಿಂಗ್ ಮಾಡಿದಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗಧಿತ ಅವಧಿಯೊಳಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಕ್ರಮವಹಿಸಲು ಸೂಚಿಸಿದರಲ್ಲದೆ ದುರ್ಬಳಕೆ ಕಂಡು ಬಂದ್ದಲ್ಲಿ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಂಪನಿ, ವಿತರಕರು, ಬುಕ್ಕಿಂಗ್, ದಾಸ್ತಾನು ಲಭ್ಯ, ಎಷ್ಟು ಗ್ಯಾಪ್ ಇದೆ ಎಂಬುದರ ಮಾಹಿತಿಯನ್ನು ಪ್ರತಿದಿನದ ಮಾಹಿತಿ ಒದಗಿಸುವಂತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ಶ್ರೀನಿಧಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಅರುಣ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನಿಲ್, ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಹೊಟೇಲ್ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!