Tuesday, March 31, 2026
Homeಕ್ರೈಮ್ಹಾಸನ: ಡೀಸೆಲ್‌ ಟ್ಯಾಂಕರ್‌- ಕಾರು ನಡುವೆ ಭೀಕರ ಅಪಘಾತ: ತಪ್ಪಿದ ದುರಂತ

ಹಾಸನ: ಡೀಸೆಲ್‌ ಟ್ಯಾಂಕರ್‌- ಕಾರು ನಡುವೆ ಭೀಕರ ಅಪಘಾತ: ತಪ್ಪಿದ ದುರಂತ

ಹಾಸನ: ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಡೀಸೆಲ್‌ ಟ್ಯಾಂಕರ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಭಾರೀ ದುರಂತವೊಂದು ತಪ್ಪಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಟ್ಯಾಂಕರ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಡೀಸೆಲ್‌ ಸೋರಿಕೆಯಾಗಿರುವುದು ಕಂಡುಬಂದಿದೆ. ಆದ್ರೆ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಮುಂದಾಗುವ ಅನಾಹುತ ತಪ್ಪಿದೆ. 

ಇನ್ನೂ ಟ್ಯಾಂಕರ್‌ ಡಿಕ್ಕಿಯಿಂದ ಕಾರಿನ ಒಂದು ಬದಿ ನಜ್ಜುಗುಜ್ಜಾಗಿದ್ದು, ರಸ್ತೆಯ ಇನ್ನೊಂದು ಬದಿಗೆ ಹಾರಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನಗರ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!