Wednesday, August 12, 2026
Homeಕ್ರೈಮ್ಹಾಸನ: ಅರಣ್ಯ ಇಲಾಖೆ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ ಮರ, ವಾಹನ ವಶಕ್ಕೆ!

ಹಾಸನ: ಅರಣ್ಯ ಇಲಾಖೆ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ ಮರ, ವಾಹನ ವಶಕ್ಕೆ!

Telegram Group
Join Now

ಸಕಲೇಶಪುರ: ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರಗಳನ್ನು ವಶಪಡಿಸಿಕೊಂಡಿರುವ ಘಟನೆ ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ನಡೆದಿದೆ.‌

ಹಾಸನದ ಕಡೆಯಿಂದ ಮಂಗಳೂರು ಕಡೆಗೆ ಎರಡು ಗೂಡ್ಸ್ ವಾಹನಗಳಲ್ಲಿ ಯಾವುದೇ ಪರವಾನಿಗೆ ಪಡೆಯದೆ
ತರಕಾರಿ ಸಾಗಾಟ ಮಾಡುವ ರೀತಿ ಟಾರ್ಪಲ್ ಕಟ್ಟಿಕೊಂಡು ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಏಳು ಟನ್‌ನಷ್ಟು ವಿವಿಧ ಜಾತಿಯ ಕಾಡುಮರಗಳು ಹಾಗೂ ಎರಡು ಗೂಡ್ಸ್ ವಾಹನಗಳು, ಇಬ್ಬರು ಚಾಲಕರನ್ನು ವಶಕ್ಕೆ ಪಡೆದಿದ್ದಾರೆ.

ಆರ್‌ಎಫ್ಓ ಹೇಮಂತ್‌ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕಳೆದ ಒಂದು ವಾರದಲ್ಲಿ ದಾಳಿ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳ ಸಮೇತ ಐದು ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ‌. ‌

ಇತ್ತೀಚೆಗೆ ಅಕ್ರಮ ಮರಗಳ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು ಅರಣ್ಯ ಇಲಾಖೆ ಗಸ್ತು ಹೆಚ್ಚಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments