ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ.
ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು, ದೇವಿಯ ದರ್ಶನ ವಿಚಾರದಲ್ಲಿ ಈ ಬಾರಿ ಒಂದಿಷ್ಟು ಬದಲಾವಣೆ ಮಾಡಲಾಗಿದೆ.
ಈ ಬಾರಿ ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತ ಡ್ರೆಸ್ ಕೋಡ್ ನಿಗದಿಪಡಿಸಿದೆ. ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದು ದೇವಿ ದರ್ಶನ ಮಾಡಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ.
