ಹಾಸನ: ಕೆಲವು ದಿನಗಳಿಂದ ತುಸು ಬಿಡುವು ನೀಡಿದ್ದ ಮುಂಗಾರು ಮಳೆ ಮತ್ತೆ ಕರ್ನಾಟಕದಾದ್ಯಂತ ಅಬ್ಬರಿಸತೊಡಗಿದೆ.ಹಲವೆಡೆ ಮಳೆಯಿಂದಾಗಿ ಅನಾಹುತ-ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಏಳು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ
ಹೌದು .. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಸಕಲೇಶಪುರ, ಬೇಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ಇಂದು ರಜೆ ಘೋಷಣೆ ಮಾಡಲಾಗಿದೆ.
