ಹಾಸನ: ಆಲೂರು ತಾಲ್ಲೂಕಿನ ಮಾವನೂರು ಬಳಿ ಭಾರೀ ರಸ್ತೆ ಅಪಘಾತ ಸಂಭವಿಸಿದ್ದು.
ಆಲೂರಿನಿಂದ ಹಾಸನದತ್ತ ತೆರಳುತ್ತಿದ್ದ ಓಮಿನಿ ವಾಹನ ಡಿವೈಡರ್ ಹತ್ತಿಸಿ, ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.ಸ್ವಿಫ್ಟ್ ಕಾರಿನಲ್ಲಿದ್ದ ಗಂಡ-ಹೆಂಡತಿಗೆ ಗಾಯವಾಗಿದ್ದು, ಚಿಕ್ಕ ಮಗುವಿನ ಕೈ ಮುರಿದಿದೆ.ಓಮಿನಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ಬಳಿಕ ಸ್ಥಳದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ, ನೂರಾರು ಜನರು ಸೇರಿ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸರಿಪಡಿಸಿದರು.ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
