Tuesday, October 13, 2026
Homeಕ್ರೈಮ್Hassan: ರಾ. ಹೆ. 75ರಲ್ಲಿ ಭೀಕರ ಅಪಘಾತ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಸವಾರ ದುರ್ಮರಣ

Hassan: ರಾ. ಹೆ. 75ರಲ್ಲಿ ಭೀಕರ ಅಪಘಾತ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಸವಾರ ದುರ್ಮರಣ

Telegram Group
Join Now

ಆಲೂರು:  ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು  ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಭರತವಳ್ಳಿ ಕ್ರಾಸ್‌ನಲ್ಲಿ ನಡೆದಿದೆ. ಮೃತ ವ್ಯಕ್ತಿ ಯೋಗೇಶ್ (45), ದಾಟೂರು ಗ್ರಾಮದ ನಿವಾಸಿ.

ಬೈರಪುರದ ಟ್ರ್ಯಾಕ್ಟರ್ ಶೋರೂಂನಲ್ಲಿ ಕೆಲಸ ಮುಗಿಸಿ ಸೋಮವಾರ ಸಂಜೆ 7:30 ಸಮಯದಲ್ಲಿ ಹಾಸನದ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ನಡೆದಿದ್ದು ಸಕಲೇಶಪುರ ಕಡೆಯಿಂದ ಬರುತ್ತಿದ್ದ ಕಾರು, ಭರತವಳ್ಳಿ ಕ್ರಾಸ್ ಬಳಿ ಯೋಗೇಶ್ ಅವರ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಕಾರು ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!