ಹಾಸನ : ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮೂರುದಿನಗಳ ಕಾಲ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗಿನ ಜಾವ 5.30 ರಲ್ಲಿ ಈ ಅವಘಢ ಸಂಭವಿಸಿದ್ದು ಮೃ*.ತ ಮಹಿಳೆಯನ್ನು 63 ವರ್ಷದ ಜವರಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿದ್ದ ವೇಳೆ ಮನೆ ಗೋಡೆ ಕುಸಿದು ಬಿದ್ದಿದ್ದರಿಂದ ಈ ಘಟನೆ ನಡೆದಿದೆ. ಮನೆಯಲ್ಲಿದ್ದ ಜವರಮ್ಮನವರ ಮಗ ಅದೃಷ್ಟವಶಾತ್ ಪಾರಾಗಿದ್ದಾರೆ.
ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಶಾಸಕ ಎ.ಮಂಜು , ಬಿಎಸ್ಪಿ ಮುಖಂಡ ಹರೀಶ್ ಅತ್ನಿ ಹಾಗೂ ಉಪವಿಭಾಗಾಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
