ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಇನ್ನೋವಾ ಕಾರು ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಲಿಂಗಾಪುರ ಗ್ರಾಮದ ಬಳಿ ನಡೆದಿದೆ.

ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ಸಿಗದೇ ಅಡಿಕೆ ತೋಟಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕ ಮಹಮದ್ (30) ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಬಿದ್ದ ರಭಸಕ್ಕೆ ಮೂರು ಅಡಿಕೆ ಮರಗಳು ಮುರಿದು ಹೋಗಿದ್ದು, ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
