Tuesday, February 10, 2026
Homeಕ್ರೈಮ್ಹಾಸನ: ಬೈಕ್​​ಗೆ ಕೆಎಸ್​​​ಆರ್​​ಟಿಸಿ ಬಸ್​ ಡಿಕ್ಕಿ; ಮೂವರು ಯುವಕರ ದುರ್ಮರಣ!

ಹಾಸನ: ಬೈಕ್​​ಗೆ ಕೆಎಸ್​​​ಆರ್​​ಟಿಸಿ ಬಸ್​ ಡಿಕ್ಕಿ; ಮೂವರು ಯುವಕರ ದುರ್ಮರಣ!

ಹಾಸನ: ಕೆಎಸ್​​​ಆರ್​​ಟಿಸಿ ಬಸ್ ​​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವಂತಹ ಭೀಕರ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ.

ಇರ್ಫಾನ್(25), ತರುಣ್(26) ಮತ್ತು ರೇವಂತ್(27) ಮೃತ ಯುವಕರು. ಹಳ್ಳಿಮೈಸೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು ಎನ್ನಲಾಗುತ್ತಿದೆ. ಕೆಎಸ್​​​ಆರ್​​ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಮೈಸೂರು ಕಡೆಯಿಂದ ಒಂದೇ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.

ಇನ್ನು ಡಿಕ್ಕಿ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!