ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ದಿನಕ್ಕೊಂದು ಅವಾಂತರಗಳು ಸೃಷ್ಟಿಯಾಗುತ್ತಲೇ ಇದೆ. ಅಂದಹಾಗೆ ಪಶ್ಚಿಮ ಘಟ್ಟ ಸಾಲಿನಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂ ಕುಸಿತ ಕಂಡಿದೆ.

ಹೌದು .. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟ ಸಾಲಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಕುಸಿದ ಭಾರೀ ಪ್ರಮಾಣದ ಮಣ್ಣು ಹಾಗೆ ರಸ್ತೆಗೆ ಗುಡ್ಡ ಕುಸಿತದಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮುಂಜಾನೆ 3 ಗಂಟೆಯಿಂದ ಬಿಸಿಲೆ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದ್ದುಸತತ ಐದು ಗಂಟೆಗಳಿಂದ ನಿಂತಲ್ಲೇ ನಿಂತ ವಾಹನಗಳುಹೀಗಾಗಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ ಕಂದಾಯ ಇಲಾಖೆ ಸಿಬ್ಬಂದಿ
ಕಳೆದ ಮೂರು ದಿನಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ.
