ಹಾಸನ: ಈಶ್ವರಹಳ್ಳಿ–ಕೂಡಿಗೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲೂರು ತಾಲ್ಲೂಕಿನ ಚಿನ್ನಳ್ಳಿ ಗ್ರಾಮದ ಜಮ್ಮಿದ್ ಅವರು ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಷಯವೆಂದು ಶಾಸಕ ಸಿಎಂ ಟ್ ಮಂಜು ತಿಳಿಸಿದರು,
ಹೌದು .. ಅವರು ಹಾಸನ ಜಿಲ್ಲಾ ಆಸ್ಪತ್ರೆ (HIMS)ಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದರು. ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.
ಅದೇ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವೀದ್ ಅವರ ಆರೋಗ್ಯವನ್ನು ವಿಚಾರಿಸಿ ವೈದ್ಯರಿಂದ ಚಿಕಿತ್ಸೆ ಕುರಿತು ಮಾಹಿತಿ ಪಡೆದು ಅಗತ್ಯ ವೈದ್ಯಕೀಯ ಸೇವೆಯನ್ನು ಸಮರ್ಪಕವಾಗಿ ಒದಗಿಸುವಂತೆ ಸೂಚಿಸಲಾಯಿತು. ಇದೇ ವೇಳೆ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿ, ನವೀದ್ ಅವರು ಶೀಘ್ರ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು.
