Friday, August 14, 2026
Homeಕ್ರೈಮ್ಹಾಸನ: ನಿಗೂಢ ಸ್ಫೋಟ ಕೇಸ್‌: ಚಿಕಿತ್ಸೆ ಫಲಿಸದೆ ದಂಪತಿ ಸಾವು, ಅನಾಥವಾದ 14 ತಿಂಗಳ ಮಗು!

ಹಾಸನ: ನಿಗೂಢ ಸ್ಫೋಟ ಕೇಸ್‌: ಚಿಕಿತ್ಸೆ ಫಲಿಸದೆ ದಂಪತಿ ಸಾವು, ಅನಾಥವಾದ 14 ತಿಂಗಳ ಮಗು!

Telegram Group
Join Now

ಹಾಸನ: ಹಳೇಆಲೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತ ಪಟ್ಟಿದ್ದಾರೆ.


ಸುದರ್ಶನ್ (32) ಮತ್ತು ಪತ್ನಿ ಕಾವ್ಯ (27). ದಂಪತಿಯನ್ನು ಗಾಯಗೊಂಡ ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಭೀರವಾಗಿದ್ದರಿಂದ ಅವರನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು.

ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ದಂಪತಿಯ 14 ತಿಂಗಳ ಮಗು ಅನಾಥವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೋಮವಾರ ರಾತ್ರಿ 8:30 ರ ಸಮಯದಲ್ಲಿ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಮನೆಯಲ್ಲಿದ್ದ ಎರಡು ಸಿಲಿಂಡರ್‌ ಹಾಗೂ ಗೀಸರ್‌ ಹಾಗೇ ಇದ್ದೂ ಸ್ಫೋಟಕ್ಕೆ ಕಾರಣವೇನು ಎಂಬುದು ನಿಗೂಢವಾಗಿಯೇ ಉಳಿದಿತ್ತು. ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ.

ಮನೆಯಲ್ಲಿ ಸಿಡಿಮದ್ದನ್ನು ತಯಾರಿಸುತ್ತಿದ್ದರು. ಅದಕ್ಕಾಗಿ ಮದ್ದನ್ನು ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments