Sunday, June 28, 2026
Homeಕ್ರೈಮ್ಹಾಸನ: ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆ: ಕೊಲೆ ಶಂಕೆ!

ಹಾಸನ: ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆ: ಕೊಲೆ ಶಂಕೆ!

ಹಾಸನ: ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಮಹಿಳೆ ಪತಿಯಿಂದ ದೂರಾಗಿ 8 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು. ಎರಡು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದ್ದನ್ನ ಸ್ಥಳೀಯರು ಗಮನಿಸಿದಾಗ ಈ ಪ್ರಕರಣ ಬಯಲಾಗಿದೆ.

ಮನೆಯ ಬಾಗಿಲು ತೆರೆದಿದ್ದರೂ ಯಾರ ಸುಳಿವು ಇಲ್ಲದೇ ಇದ್ದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಸ್ಪಂದನ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಸಂಪೂರ್ಣ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments