ಹಾಸನ: ಹಬ್ಬದ ಸಂಭ್ರಮದ ನಡುವೆಯೇ ರಕ್ತದ ಕೋಡಿ ಹರಿದಿದೆ.. ತಾಲೂಕಿನ ಯರೆಹಳ್ಳಿ ಗ್ರಾಂದ ಬಳಿ 26 ವರ್ಷದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಹೌದು .. ಮೃತನು ಹಾಸನ ನಗರದ ದೊಡ್ಡಮಂಡಿಗನಹಳ್ಳಿಯ ನಿವಾಸಿ ಅಂಕಿತ್(26) ಎಂದು ಗುರುತಿಸಲಾಗಿದೆ. ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ.
ಬುಧವಾರ ರಾತ್ರಿ ಅಂಕಿತ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹಠಾತ್ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರು ಇದನ್ನು ನೋಡಿ ಪೊಲೀಸರಿಗೆ ಕಾಲ್ ಮಾಡಿ ತಿಳಿಸಿದ್ದು, ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡಸಿದವರ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ
