Sunday, July 26, 2026
Homeಜಿಲ್ಲಾಸುದ್ದಿಹಾಸನ: ನಮ್ಮ ಜಮೀರ್ ಮತ್ತೆ ಮಂತ್ರಿಮಂಡಲ ಸೇರುತ್ತಾರೆ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಹಾಸನ: ನಮ್ಮ ಜಮೀರ್ ಮತ್ತೆ ಮಂತ್ರಿಮಂಡಲ ಸೇರುತ್ತಾರೆ: ಕೋಡಿಮಠದ ಸ್ವಾಮೀಜಿ ಭವಿಷ್ಯ

Telegram Group
Join Now

ಹಾಸನ: ನಮ್ಮ ಜಮೀರ್ ಸಾಹೇಬ್ರು ಮತ್ತೊಮ್ಮೆ ಮಂತ್ರಿಮಂಡಲ ಸೇರುತ್ತಾರೆ ಎಂದು ಕೋಡಿಮಠದ  ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಭವಿಷ್ಯ ನುಡಿದಿದ್ದಾರೆ

ಜಮೀರ್ ಅವರ ಆಡಿಯೋ ವಿಚಾರ ಅಪಪ್ರಚಾರದ ಉದ್ದೇಶದಿಂದ ಆಗಿದೆ. ಇನ್ನೊಂದು ದೊಡ್ಡ ಅಪಪ್ರಚಾರ ಇತ್ತು. ಇದು ಮೊದಲು ಬಂದು ಆ ಅಪಪ್ರಚಾರ ಮುಚ್ಚಿ ಹೋಗುತ್ತಿದೆ. ಜಮೀರ್ ಹೆದರುವ ಅವಶ್ಯಕತೆ ಇಲ್ಲ. ಅವರು ಮತ್ತೊಮ್ಮೆ ಮಂತ್ರಿಮಂಡಲ ಸೇರುತ್ತಾರೆ ಎಂದಿದ್ದಾರೆ.

ಅರಸೀಕೆರೆಯ ಅಲ್ ಅಮೀನ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿವೇತನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಅವರ ಜೊತೆಗೆ ನಮ್ಮ ಶಿವಲಿಂಗೇಗೌಡರಿಗೂ ಮಂತ್ರಿ ಸ್ಥಾನ ಸಿಗುತ್ತದೆ. ಯೋಚನೆ ಮಾಡುವುದು ಬೇಡ. ಸಂಬಂಧಪಟ್ಟವರ ಜೊತೆ ನಾನು ಈಗಾಗಲೇ ಮಾತನಾಡಿದ್ದೇನೆ. ನಾಳೆಯೂ ಮಾತನಾಡುತ್ತೇನೆ. ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ. ಜಮೀರ್ ಇದ್ದರೆ ಮಾತ್ರ ಅದು ಸರ್ಕಾರ ಎನಿಸಿಕೊಳ್ಳುತ್ತದೆ. ಆ ದೃಷ್ಟಿಯಿಂದ ಅವರು ಮತ್ತೊಮ್ಮೆ ಮಂತ್ರಿ ಆಗುತ್ತಾರೆ. ಯಾವುದೇ ಕಾರಣಕ್ಕೂ ಆಕ್ರೋಶಕ್ಕೆ ಒಳಗಾಗಬೇಡಿ. ಶಾಂತಿಯಿಂದ ಇರಿ. ಇದರ ಬಗ್ಗೆ ನಾನು ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಮೀರ್‌ಗೆ ಮಂತ್ರಿ ಸ್ಥಾನ ಸಿಕ್ಕಿದ ಕೂಡಲೇ ಇಲ್ಲಿಗೆ ಕರೆದುಕೊಂಡು ಬರೋಣ. ಅವರ ಮೇಲೆ ಭಗವಂತನ ಕೃಪೆ ಇದೆ. ಅವರು ಜಾತ್ಯತೀತವಾಗಿ ದುಡಿದು ಸಮಾಜ ಸೇವೆ ಮಾಡಿದ್ದಾರೆ. ಅವರಿಗೆ ನಾವೆಲ್ಲಾ ಬೆಂಬಲ ಕೊಡೋಣ. ಎಂದು ಜಮೀರ್ ಪರ ಸ್ವಾಮೀಜಿ ಬ್ಯಾಟ್ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments